ಕರ್ನಾಟಕ

karnataka

ETV Bharat / state

ಸಿದ್ದಗಂಗಾ ಶ್ರೀ ಪ್ರತಿಮೆ ನಿರ್ಮಾಣ: ಸಮಸ್ಯೆ ಪರಿಶೀಲಿಸಿ ಪರಿಹರಿಸುವುದಾಗಿ ಡಿಸಿ ಭರವಸೆ

ಶ್ರೀ ಶಿವಕುಮಾರ ಸ್ವಾಮೀಜಿಗಳ ಪ್ರತಿಮೆ ನಿರ್ಮಾಣ ಸಂಬಂಧ 16 ಎಕರೆ 16 ಕುಂಟೆ ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡಲಾಗಿದೆ. ಇಲ್ಲಿ 5 ಎಕರೆಗೆ ಅರಣ್ಯ ಇಲಾಖೆಗೆ ಒಳಪಟ್ಟು ಸಮಸ್ಯೆ ಇರುತ್ತದೆ. ಅದನ್ನು ಪರಿಶೀಲಿಸಿ ಪರಿಹಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್​ ಕುಮಾರ್​​ ಹೇಳಿದರು.

shivakumara-swamiji-statue-build-in-veerapura
ಶ್ರೀ ಶಿವಕುಮಾರ ಮಹಾಸ್ವಾಮಿಗಳು

By

Published : Apr 2, 2021, 10:41 PM IST

ರಾಮನಗರ: ಮಾಗಡಿ ತಾಲ್ಲೂಕಿನ ವೀರಪುರದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಪ್ರತಿಮೆ ನಿರ್ಮಾಣದ ಸಂಬಂಧ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ. ಸಭೆ ನಡೆಸಿ ಪರಿಶೀಲನೆ ನಡೆಸಿದರು.

ಪ್ರತಿಮೆ ನಿರ್ಮಾಣ ಸಂಬಂಧ 16 ಎಕರೆ 16 ಕುಂಟೆ ಸ್ಥಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡಲಾಗಿದೆ. ಇಲ್ಲಿ 5 ಎಕರೆಗೆ ಅರಣ್ಯ ಇಲಾಖೆಗೆ ಒಳಪಟ್ಟು ಸಮಸ್ಯೆ ಉಂಟಾಗಿದೆ, ಅದನ್ನು ಪರಿಶೀಲಿಸಿ ಪರಿಹರಿಸುವುದಾಗಿ ಡಿಸಿ ಭರವಸೆ ನೀಡಿದರು.

ಸಿದ್ದಗಂಗಾ ಶ್ರೀ ಪ್ರತಿಮೆ ನಿರ್ಮಾಣದ ಕುರಿತು ಶ್ರೀಗಳ ಜೊತೆ ಡಿಸಿ ಸಭೆ

ಶಿವಕುಮಾರ ಶ್ರೀಗಳ ಪ್ರತಿಮೆ ನಿರ್ಮಾಣ ಪುಣ್ಯದ ಕೆಲಸವಾಗಿದ್ದು, ವೀರಪುರದಲ್ಲಿ ವಿಶ್ವ ಪಾರಂಪರಿಕ ‌ಕೇಂದ್ರ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ವೀರಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ರುದ್ರೇಶ್, ವ್ಯವಸ್ಥಾಪಕ ನಿರ್ದೇಶಕ ಗಂಗಾಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಉಪಸ್ಥಿತರಿದ್ದರು.

ABOUT THE AUTHOR

...view details