ರಾಮನಗರ: ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ, ವಿಧಾನಸೌಧ ನಿರ್ಮಾತೃವೂ ಆದ ಕೆಂಗಲ್ ಹನುಮಂತಯ್ಯನವರ ಪುತ್ಥಳಿ ರಾಮನಗರದಲ್ಲಿ ಲೋಕಾರ್ಪಣೆಗೊಳಿಸಲಾಗಿದೆ.
ರಾಮನಗರದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಅನಾವರಣ - ಕೆಂಗಲ್ ಹನುಮಂತಯ್ಯ ಪುಣ್ಯಸ್ಮರಣೆ
ರೇಷ್ಮೆನಗರಿ ರಾಮನಗರದಲ್ಲಿ ನಿನ್ನೆ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಅನಾವರಣಗೊಳಿಸಲಾಯಿತು.
ರಾಮನಗರದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಅನಾವರಣ
ರಾಮನಗರದ ಹಳೇ ಬಸ್ ನಿಲ್ದಾಣ ವೃತ್ತದಲ್ಲಿ ಕೆಂಗಲ್ ಹನುಮಂತಯ್ಯನವರ 41ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಿನ್ನೆ ಪ್ರತಿಮೆ ಅನಾವರಣಗೊಳಿಸಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿ ಮುಖಂಡರಾದ ಪಿ.ನಾಗರಾಜ್ ಸೇರಿದಂತೆ ಹಲವು ಪಕ್ಷದ ಮುಖಂಡರ ಇದ್ದರು.