ರಾಮನಗರ: ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣ ನಗರದ ಪಾರ್ವತಿ ಚಿತ್ರ ಮಂದಿರದ ಬಳಿ ಚೇತನ್ (3) ಮೇಲೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದೆ.
ರಸ್ತೆ ಬಳಿ ನಿಂತಿದ್ದ ವೇಳೆ ಏಕಾಏಕಿ ನಾಯಿಗಳು ದಾಳಿ ನಡೆಸಿವೆ. ಬಾಲಕನ ಚಿರಾಟ ಗಮನಿಸಿ ತಂದೆ-ತಾಯಿ ಹಾಗೂ ಸ್ಥಳೀಯರು ತಕ್ಷಣ ಮಗುವನ್ನು ರಕ್ಷಿಸಿದ್ದಾರೆ. ನಾಯಿಗಳು ಬಾಲಕನ ಹೊಟ್ಟೆ ಹಾಗೂ ಕೈಗಳಿಗೆ ಕಡಿದಿದ್ದು, ತಕ್ಷಣವೇ ಖಾಸಗಿ ನರ್ಸಿಂಗ್ ಹೋಮ್ಗೆ ತೆರಳಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.