ರಾಮನಗರ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಮನಗರ ಜಿಲ್ಲಾ ನೂತನ ಅಧ್ಯಕ್ಷರಾಗಿ ಟಿ.ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ನೇಮಕವಾಗಿರುವ ಕೃಷ್ಣಪ್ಪ ಅವರು ವಿದ್ಯಾರ್ಥಿ ದಿಸೆಯಲ್ಲೆ ಸಂಘಟನೆಗಳಲ್ಲಿ ತೊಡಗಿಕೊಂಡಿದ್ದರು. ಕುವೆಂಪು ಕಾಲೇಜಿನಲ್ಲಿ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾಗಿ ವಿಧ್ಯಾರ್ಥಿಗಳ ಹಿತ ಕಾಪಾಡುವಲ್ಲಿ ತಮ್ಮದೇ ಆದ ಚಿಂತನೆವುಳ್ಳವರಾಗಿದ್ದವರು. ಇದಲ್ಲದೆ ಕೊಡಂಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ತಮ್ಮದೇ ಆದ ರೀತಿಯಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಿ ಜನಾನುರಾಗಿಯಾಗಿ ಇಡೀ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದ್ದಾರೆ.