ರಾಮನಗರ :ಚನ್ನಪಟ್ಟಣ ತಹಶೀಲ್ದಾರ್ ಆಗಿದ್ದ ಸುದರ್ಶನ್‌ರನ್ನ ಚಾಮರಾಜನಗರದ ಯಳಂದೂರಿಗೆ ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ಖಂಡಿಸಿ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದ ಸಮಾನ ಮನಸ್ಕರ ಒಕ್ಕೂಟದ ವತಿಯಿಂದ ಪ್ರತಿಭಟಿಸಲಾಯಿತು.
ರಾಮನಗರದಲ್ಲಿ ತಹಶೀಲ್ದಾರ್ ವರ್ಗಾವಣೆ ಖಂಡಿಸಿ ಪ್ರತಿಭಟನೆ - ರಾಮನಗರದಲ್ಲಿ ತಹಶೀಲ್ದಾರ್ ವರ್ಗಾವಣೆ ಖಂಡಿಸಿ ಪ್ರತಿಭಟನೆ
ಸುದರ್ಶನ್‌ರವರು ಚನ್ನಪಟ್ಟಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಯಾವ ಕಾರಣವೂ ಇಲ್ಲದೇ ಅವರನ್ನ ಏಕಾಏಕಿ ವರ್ಗಾವಣೆ ಮಾಡಲಾಗಿದೆ..
![ರಾಮನಗರದಲ್ಲಿ ತಹಶೀಲ್ದಾರ್ ವರ್ಗಾವಣೆ ಖಂಡಿಸಿ ಪ್ರತಿಭಟನೆ ರಾಮನಗರ](https://etvbharatimages.akamaized.net/etvbharat/prod-images/768-512-8278856-574-8278856-1596456556239.jpg)
ಚನ್ನಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಧರಣಿ ಕುಳಿತು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸುದರ್ಶನ್‌ರವರು ಚನ್ನಪಟ್ಟಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಯಾವ ಕಾರಣವೂ ಇಲ್ಲದೇ ಅವರನ್ನ ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಪ್ರಾಮಾಣಿಕ ಅಧಿಕಾರಿಗಳಿಗೆ ನೆಲೆಯಿಲ್ಲ ಎಂಬ ಸಂದೇಶವನ್ನ ರಾಜ್ಯ ಸರ್ಕಾರ ಸಾರುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಮುಂದಿನ 15 ದಿನಗಳಲ್ಲಿ ಅವರನ್ನ ಮತ್ತೆ ಚನ್ನಪಟ್ಟಣಕ್ಕೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಈ ಸಂದರ್ಭದಲ್ಲಿ ನೂತನ ತಹಶೀಲ್ದಾರ್ ನಾಗೇಶ್‌ರ ಅವರಿಗೆ ಮನವಿ ಸಲ್ಲಿಸಲಾಯಿತು.