ರಾಮನಗರ:ಕೆಎಸ್ಆರ್ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್ ಬಳಿ ಇಂದು ನಡೆದಿದೆ. ಮೃತರನ್ನು ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತ ಕುಮಾರ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಂಗಳೂರಿನವರು. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಎಸ್ಪಿ ಕಾರ್ತಿಕ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಟೋಗೆ ಲಾರಿ ಡಿಕ್ಕಿ ನಾಲ್ವರ ಸಾವು:ಬೀದರ್ನಲ್ಲಿಂದುಆಟೊವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮನ್ನಳ್ಳಿ ಕ್ರಾಸ್ ಬಳಿ ನಡೆದಿದೆ. ಪ್ರಮೀಳಾ ಜಗದಾಳೆ (32), ಪತಿ, ಆಟೋ ಚಾಲಕ ಸುನೀಲ ಜಗದಾಳೆ (35), ತಾಯಿ ಅನುಷಾಬಾಯಿ ಜಗದಾಳೆ (60) ಹಾಗೂ ಸಂಬಂಧಿ ಪೂಜಾ ಜಾಧವ್ (17) ಮೃತರು ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗೀತಾ ಜಗದಾಳೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಲಾತೂರ ಆಸ್ಪತ್ರೆಗೆ ದಾಖಲಿಸಲಾಗಿದೆ.