ಕರ್ನಾಟಕ

karnataka

ETV Bharat / state

ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು - Terrible series of accidents

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಭೀಕರ ಸರಣಿ ಅಪಘಾತ ನಡೆದಿದೆ.

Mysore Express Highway
Mysore Express Highway

By ETV Bharat Karnataka Team

Published : Sep 25, 2023, 11:05 PM IST

Updated : Sep 26, 2023, 11:02 AM IST

ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಸರಣಿ ಅಪಘಾತ

ರಾಮನಗರ:ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಸರಣಿ ಅಪಘಾತ ನಡೆದಿದೆ. ಆರು ಕಾರುಗಳ ನಡುವೆ ಭೀಕರ ಸರಣಿ ಅಪಘಾತವಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ರೇಣುಕಮ್ಮ, ಮಂಜುಳಾ ಹಾಗೂ ಸುದೀರ್ ಎಂಬುವವರೇ ಮೃತಪಟ್ಟವರು. ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ.

ತುಂತುರು ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಈ ಸರಣಿ ಕಾರು ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿರುವ ವಾಹನಗಳು ಸರಿಯಾಗಿ ಕಾಣದ ಹಿನ್ನೆಲೆಯಲ್ಲಿ ಹಿಂಬದಿಯಿಂದ ಒಂದಕ್ಕೊಂದು ಕಾರುಗಳು ಡಿಕ್ಕಿಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಕಾರುಗಳು ಭೀಕರ ಅಪಘಾತವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಸರಣಿ ಅಪಘಾತ.. ಸಂಪೂರ್ಣ ನಜ್ಜುಗುಜ್ಜಾದ ಕಾರು.. ಅದೃಷ್ಟವಶಾತ್​ ಪಾರಾದ ಚಾಲಕ: CCTV Video

Last Updated : Sep 26, 2023, 11:02 AM IST

ABOUT THE AUTHOR

...view details