ರಾಮನಗರ: ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿದು, ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್ನಲ್ಲಿ ನಡೆದಿದೆ.
ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿತ: ಇಬ್ಬರು ಕಾರ್ಮಿಕರ ದುರ್ಮರಣ - ರಾಮನಗರ: ಇಬ್ಬರು ಕಾರ್ಮಿಕರ ದುರ್ಮರಣ
ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿದು, ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್ನಲ್ಲಿ ನಡೆದಿದೆ.
ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿತ: ಇಬ್ಬರು ಕಾರ್ಮಿಕರ ದುರ್ಮರಣ
ಆಂಧ್ರ ಮೂಲದ ಕರಿಯಪ್ಪ (36) , ಬಿಹಾರ ಮೂಲದ ನಿಖಿಲೇಶ್ (32) ಮೃತರು. ಕೆಂಪೇಗೌಡ ಲೇಔಟ್ನಲ್ಲಿ ಒಳಚರಂಡಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಮಣ್ಣು ತೆಗೆಯಲು ಗುಂಡಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಗುಂಡಿ ಸುತ್ತಲಿದ್ದ ಗುಡ್ಡ ಕುಸಿದು ಈ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಬಳಿಕ ಜೆಸಿಬಿ ಮೂಲಕ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಶವಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.