ರಾಮನಗರ:ಸಮ್ಮಿಶ್ರ ಸರ್ಕಾರವಿದ್ದಾಗ ಜಿಲ್ಲೆಯ ಬಾನಂದೂರು ಮತ್ತು ವೀರಾಪುರ ಗ್ರಾಮಗಳ ಅಭಿವೃದ್ಧಿಗೆ ತಲಾ 25 ಕೋಟಿ ಹಣವನ್ನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಸರ್ಕಾರ ಅದನ್ನ ಮರೆತಂತೆ ಜಾಣ ಮರೆವು ಪ್ರದರ್ಶಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.
ಬಿಡದಿಯಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾನಂದೂರು ಮತ್ತು ವೀರಾಪುರ ಗ್ರಾಮದ ಅಭಿವೃದ್ಧಿಗೆ ತಲಾ 25 ಕೋಟಿ ಹಣವನ್ನ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಹೊಸ ಸರ್ಕಾರದಲ್ಲಿ ಈ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈ ಬಗ್ಗೆ ಸಭೆ ಕರೆಯುತ್ತಾರೆ ಅಂತಾ ನಾವು ಕಾಯ್ತಾ ಇದ್ದೇವೆ. ಆದರೆ ಇನ್ನೂ ನಮ್ಮನ್ನ ಕರೆದಿಲ್ಲ. ಸರ್ಕಾರ ತಾರತಮ್ಯ ನೀತಿಯನ್ನ ಬಿಡಬೇಕೆಂದು ಸಂಸದ ಡಿ.ಕೆ.ಸುರೇಶ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.