ಕರ್ನಾಟಕ

karnataka

ETV Bharat / state

ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಬಂದ ಅಧಿಕಾರಿಗಳನ್ನು ತಡೆದು ಪ್ರತಿಭಟನೆ - the workers to quarantine

ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಬಳ್ಳಾರಿ ಮೂಲದ 25 ಕ್ಕೂ ಹೆಚ್ಚು ಕಾರ್ಮಿಕರನ್ನು ಗ್ರಾಮದ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಮುಂದಾಗಿದ್ದ ಆರೋಗ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

The villagers did not allow the workers to quarantine
ಅಧಿಕಾರಿಗಳನ್ನು ತಡೆದು ಪ್ರತಿಭಟನೆ

By

Published : May 8, 2020, 11:59 AM IST

ರಾಮನಗರ:ಬಳ್ಳಾರಿ ಕಾರ್ಮಿಕರನ್ನು ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಕ್ವಾರಂಟೈನ್ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಅಧಿಕಾರಿಗಳನ್ನು ತಡೆದು ಪ್ರತಿಭಟನೆ

ಗ್ರಾಮದ ದೇವರಾಜು ಅರಸು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇವರನ್ನು ಇಲ್ಲಿ ಕ್ವಾರಂಟೈನ್​​​ ಮಾಡಿದರೆ ನಮ್ಮ ಗ್ರಾಮದವರಿಗೆ ಸಮಸ್ಯೆಯಾಗುತ್ತೆ. ಯಾವುದೇ ಕಾರಣಕ್ಕೂ ನಾವು ಅವರನ್ನು ಇಲ್ಲಿ ಕ್ವಾರಂಟೈನ್​​ ಮಾಡಲು ಬಿಡುವುದಿಲ್ಲ ಎಂದು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details