ರಾಮನಗರ: ರಾಜ್ಯದಲ್ಲಿ ಯಾವುದೇ ಆಕ್ಸಿಜನ್ ಸಮಸ್ಯೆ ಇಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಇದೆ, ಎಂದು ರಾಮನಗರದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ - ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಇದೆ
ರಾಜ್ಯದಲ್ಲಿ ಆಕ್ಸಿಜನ್ಗೆ ಸಮಸ್ಯೆ ಇಲ್ಲ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಸೌಕರ್ಯ ಇದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.
DCM Ashwath Narayan
ರಾಜ್ಯ ಸರ್ಕಾರ ಕೊರೊನಾ ವಿಚಾರವಾಗಿ ಎಲ್ಲಾ ಅಗತ್ಯ ಕ್ರಮವಹಿಸಿದೆ. ಕೆಲವೊಂದು ಆಸ್ಪತ್ರೆಯಲ್ಲಿ ಸೌಕರ್ಯ ಇಲ್ಲದೇ ಸಮಸ್ಯೆಯಾಗಿದೆ. ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮವಹಿಸುತ್ತಿದೆ ಎಂದರು.
ರಾಮನಗರದಲ್ಲಿಯೂ ಸಹ ಯಾವುದೇ ಸಮಸ್ಯೆ ಇಲ್ಲ. ಕೇಂದ್ರ ಸರ್ಕಾರ ಸಹಾ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಿದೆ. ಸದ್ಯಕ್ಕೆ 2 ಸಾವಿರ ವೆಂಟಿಲೇಟರ್ಗಳನನ್ನು ರಾಜ್ಯಕ್ಕೆ ನೀಡಿದೆ. ನಮಗೆ ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ಇದೆ ಎಂದು ಡಿಸಿಎಂ ಹೇಳಿದ್ದಾರೆ.