ಕರ್ನಾಟಕ

karnataka

ETV Bharat / state

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

Etv Bharatthree-dead-and-three-injured-in-road-accident-at-ramanagar
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು, ಮೂವರಿಗೆ ಗಾಯ

By

Published : Jun 14, 2023, 8:39 PM IST

Updated : Jun 14, 2023, 11:01 PM IST

ರಾಮನಗರ:ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ಇನಿಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ರಾಮನಗರ ಪೊಲೀಸ್​ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೂತನ ಹೆದ್ದಾರಿಯಲ್ಲಿ ಚಾಲಕರ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ:Koppal Terrible Road Accident: ಕೊಪ್ಪಳದ ವಿವಿಧಡೆ ಭೀಕರ ರಸ್ತೆ ಅಪಘಾತ: ಒಟ್ಟು ಐವರು ಸಾವು

ಬನ್ನಿಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೈಸೂರು - ಹುಣಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ ಜೂ.12ರಂದು ನಡೆದಿತ್ತು. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರನ್ನು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ. ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ ಸದಸ್ಯ ಲೇ. ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಎಂದು ಗುರುತಿಸಲಾಗಿತ್ತು. ಕಾರಿನ ಒಳಗೆ ಇದ್ದ ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ತಕ್ಷಣ ಸ್ಥಳೀಯ ಗ್ರಾಮಸ್ಥರು ಧಾವಿಸಿ ರಕ್ಷಣೆ ಮಾಡಿದ್ದು, ಮೈಸೂರು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಘಟನೆಯ ವಿವರ: ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಎದುರುಗಡೆ ಬಂದ ಕಾರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ತೀವ್ರ ಗಾಯಗಳಾಗಿದ್ದು, ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಮಣ್ಯ ಭೇಟಿ ನೀಡಿ ಪರಿಶೀಲಿಸಿದರು.ಮತ್ತೊಂದೆಡೆ ಪ್ರಕರಣ ದಾಖಲಾಸಿಕೊಂಡಿರುವ ಬಿಳಿಕೆರೆ ಪೋಲಿಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಅಪಘಾತದ ನಂತರ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

Last Updated : Jun 14, 2023, 11:01 PM IST

ABOUT THE AUTHOR

...view details