ರಾಮನಗರ :ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರದ ನಾರಾಯಣಪಾಳ್ಯದ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.
ಬೆಳ್ಳೂರು ಕ್ರಾಸ್ನಿಂದ ನೆಲಮಂಗಲಕ್ಕೆ ತರಕಾರಿ ತರಲು ಹೋಗುವಾಗ ದುರಂತ ನಡೆದಿದೆ. ಮೃತರನ್ನು ರತ್ನಮ್ಮ, ಲಕ್ಕಮ್ಮ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದವರಾಗಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬೆಂಗಳೂರಿಗೆ ಕರೆದೊಯ್ಯಲಾಗಿದೆ.