ರಾಮನಗರ:ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ರಾಮನಗರ ಜಿಲ್ಲೆಯಲ್ಲಿ 3 ಕೊರೊನಾ ಪ್ರಕರಣ ಪತ್ತೆ: ಮೃತ ವ್ಯಕ್ತಿಯಲ್ಲೂ ಸೋಂಕು ದೃಢ - ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ
ರಾಮನಗರ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.
ಮೂರು ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ರಾಮನಗರದ ರೆಹಮಾನ್ ನಗರದಲ್ಲಿ ಕಾಣಿಸಿಕೊಂಡಿದ್ದು, 58 ವರ್ಷದ ಪುರುಷ ಹಾಗೂ 28 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ.
ಇವರು P-7209 ಹಾಗೂ P-7210 ರ ಸಂಪರ್ಕಿತರಾಗಿದ್ದು. ಇವರನ್ನು ಚಿಕಿತ್ಸೆಗಾಗಿ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರನೇ ಪ್ರಕರಣ ಮಾಗಡಿಯಲ್ಲಿ ಕಂಡುಬಂದಿದ್ದು. ರಕ್ತದೊತ್ತಡದಿಂದ ಬಳಲುತ್ತಿದ್ದ 90 ವರ್ಷದ ವ್ಯಕ್ತಿ ಮನೆಯಲ್ಲಿಯೇ ಮೃತಪಟ್ಟಿರುತ್ತಾರೆ. ಇವರು P-7262 ರ ಸಂಪರ್ಕಿತರಾಗಿರುತ್ತಾರೆ. ಇವರು ಮರಣ ಹೊಂದಿದ ನಂತರ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.