ಕರ್ನಾಟಕ

karnataka

ETV Bharat / state

ರಾಮನಗರದಲ್ಲಿ ಇಂದು ಮೂವರಿಗೆ ಕೊರೊನಾ ಪಾಸಿಟಿವ್​ - ರಾಮನಗರದಲ್ಲಿ ಮೂರು ಜನರಿಗೆ ಕೊರೊನಾ ಪಾಸಿಟಿವ್​

ರಾಮನಗರದಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ತಾಲ್ಲೂಕಿನ ರಾಯರದೊಡ್ಡಿ, ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಳ್ಳಿ ಹಾಗೂ ಕೈಲಾಂಚ ಗ್ರಾಮದಲ್ಲಿ ಈ ಮೂರು ಪ್ರಕರಣಗಳು ಪತ್ತೆಯಾಗಿವೆ.

Corona positive for three people
ರಾಮನಗರದಲ್ಲಿ ಇಂದು ಮೂವರಿಗೆ ಕೊರೊನಾ ಪಾಸಿಟಿವ್​

By

Published : Jun 14, 2020, 10:48 PM IST

ರಾಮನಗರ: ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ರಾಮನಗರದಲ್ಲಿ ಇಂದು ಮೂವರಿಗೆ ಕೊರೊನಾ ಪಾಸಿಟಿವ್​


ಇಂದಿನ ಮೊದಲ ಪ್ರಕರಣ ರಾಮನಗರ ತಾಲ್ಲೂಕಿನ ರಾಯರದೊಡ್ಡಿಯ Rmg-17 P-6855, 54 ವರ್ಷ, ಮಹಿಳೆ ಎಂದು ತಿಳಿದು ಬಂದಿದೆ. ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡನೇ ಪ್ರಕರಣ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಳ್ಳಿಯ Rmg-18 P-6856, 30 ವರ್ಷದ ಗಂಡು ಎಂದು ಗುರುತಿಸಲಾಗಿದ್ದು, ಐಎಲ್​ಐ ಲಕ್ಷಣದ ಹಿನ್ನೆಲೆ ಹೊಂದಿದ್ದ ಇವರನ್ನು ಚಿಕಿತ್ಸೆಗಾಗಿ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇನ್ನು 3ನೇ ಪ್ರಕರಣ ರಾಮನಗರ ತಾಲ್ಲೂಕಿನ ಕೈಲಾಂಚ Rmg-19 P-6857, 65 ವರ್ಷದ ಮಹಿಳೆ. ಇವರನ್ನು ಕೂಡ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details