ರಾಮನಗರ :ಜಿಲ್ಲೆಯ ಬಿಡದಿಯ ಕೆಂಚನಕುಪ್ಪೆ ಬಳಿಯ ಕುಂಬಾರಕಟ್ಟೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಶಾಲಾ ಬಾಲಕರು ಸಾವನ್ನಪ್ಪಿದ್ದಾರೆ.
ರಾಮನಗರ : ಈಜಲು ಕೆರೆಗೆ ಇಳಿದಿದ್ದ ಇಬ್ಬರು ಬಾಲಕರು ಸಾವು! - Ramnagar
ಇಂದು ಮುಂಜಾನೆ ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರೆ ತೆಗೆಯಲಾಗಿದೆ. ಸದ್ಯ ಮೃತ ಬಾಲಕರ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ..
![ರಾಮನಗರ : ಈಜಲು ಕೆರೆಗೆ ಇಳಿದಿದ್ದ ಇಬ್ಬರು ಬಾಲಕರು ಸಾವು! ramnagar](https://etvbharatimages.akamaized.net/etvbharat/prod-images/768-512-13426254-thumbnail-3x2-net.jpg)
ಬಿಡದಿಯ ಸರ್ಕಾರಿ ಶಾಲೆಯ 5ನೇ ತರಗತಿ ಓದುತ್ತಿದ್ದ ಕೌಶಿಕ್ (12) ಮತ್ತು ಕರ್ಣ(11) ಎಂಬುವರು ಮೃತ ಬಾಲಕರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಈ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು.
ಆದರೂ ಕೂಡ ಸಂಜೆ ವೇಳೆಗೆ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು. ಇಂದು ಮುಂಜಾನೆ ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರೆ ತೆಗೆಯಲಾಗಿದೆ. ಸದ್ಯ ಮೃತ ಬಾಲಕರ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.