ಕರ್ನಾಟಕ

karnataka

ETV Bharat / state

ರಾಮನಗರದಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣ - ಕೊರೊನಾ ಪಾಸಿಟಿವ್ ಪ್ರಕರಣಗಳು

ರಾಮನಗರ ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ 227 ಪ್ರಕರಣಗಳು ದಾಖಲಾಗಿವೆ.

Two corona positive cases confirmed in Ramanagaram
ರಾಮನಗರದಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢ

By

Published : Jul 4, 2020, 11:24 PM IST

ರಾಮನಗರ‌: ಜಿಲ್ಲೆಯಲ್ಲಿ ಇಂದು ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ರಾಮನಗರ ತಾಲೂಕಿನಲ್ಲಿ ವರದಿಯಾಗಿವೆ. ಸೋಂಕಿತರನ್ನು ರಾಮನಗರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.

ಇಂದು 28 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 115 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ.

ಇದುವರೆಗೆ ಜಿಲ್ಲೆಯಲ್ಲಿ 227 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಕನಕಪುರ 62, ಮಾಗಡಿ 83, ಚನ್ನಪಟ್ಟಣ 40 ಮತ್ತು ರಾಮನಗರದ 42 ಪ್ರಕರಣಗಳು ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ರಾಮನಗರದಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢ

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಇಂದಿನ (ಜುಲೈ 4) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 9769 (ಹೊಸದಾಗಿ ಇಂದಿನ 285 ಸೇರಿ). ಒಟ್ಟು 3,046 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 275 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 2,886 ಕ್ಕೆ ಏರಿಕೆಯಾಗಿದೆ.

ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 39 ಜನರು ತಪಾಸಣೆಗೆ ಒಳಗಾಗಿದ್ದು, ಒಟ್ಟಾರೆ 2,998 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ. ಒಟ್ಟು 12 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟಿಟ್ಯೂಷನಲ್ ಕ್ವಾರಂಟೈನ್​​ಗೆ ಇಂದು 5 ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ 340ಕ್ಕೆ ಇಳಿಕೆಯಾಗಿದೆ.

ಇಂದು ಹೊಸದಾಗಿ 285 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 10,087 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ 716 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 285 ಬಾಕಿ ವರದಿ ಸೇರಿ ಒಟ್ಟು 1,741 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details