ರಾಮನಗರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟದ ಗೊಂದಲದ ಬಗ್ಗೆ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ವಾಟಾಳ್ ನಾಗರಾಜ್ ಪ್ರತಿಭಟನೆ ನಗರದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕುಳಿತು ಪ್ರತಿಭಟನೆ ನಡೆಸುವ ಮೂಲಕ ವಾಟಾಳ್ ಹೆದ್ದಾರಿ ತಡೆ ಮಾಡಿದರು. ರಾಜ್ಯದಲ್ಲಿ 5 ತಿಂಗಳಿಂದ ಸರ್ಕಾರವೇ ಇಲ್ಲ, ಮಂತ್ರಿಮಂಡಲ ಮಾಡುವುದರಲ್ಲೇ ನಿರತರಾಗಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿಲ್ಲ, ಕರ್ನಾಟಕದಲ್ಲಿ ಸರ್ಕಾರ ಬದುಕಿಲ್ಲ ಸತ್ತು ಹೋಗಿದೆ ಎಂದು ಕಿಡಿಕಾರಿದರು.
ಸರ್ಕಾರದ ಪರಿಸ್ಥಿತಿ ಹೀನಾಯವಾಗಿದೆ. ಒಬ್ಬ ಶಾಸಕರಿಗೆ, ಮಂತ್ರಿಗಳಿಗೆ, ಲೋಕಸಭಾ ಸದಸ್ಯರಿಗೆ ಕನ್ನಡದ ಬಗ್ಗೆ ಕಾಳಜಿಯಿಲ್ಲ. ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ. ಮೇಕೆದಾಟು, ಮಹದಾಯಿ ಯೋಜನೆಯತ್ತ ಸರ್ಕಾರ ಗಮನ ಹರಿಸುತ್ತಿಲ್ಲ. ಬೆಂಗಳೂರು ಈಗ ಕನ್ನಡಿಗರ ಕೈಯಲ್ಲಿಲ್ಲ. ಪರಭಾಷಿಕರ ಕೈಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ನಡೆಯುವ ಸಮ್ಮೇಳನವು ತನ್ನ ಮೌಲ್ಯ ಕಳೆದುಕೊಂಡಿದೆ. ದೋಸೆ, ಕಿಚಡಿ ತಿಂದು ಬರೋಕೆ ಸಮ್ಮೇಳನ ಸೀಮಿತವಾಗಿದೆ ಎಂದು ವ್ಯಂಗ್ಯವಾಡಿದರು.