ರಾಮನಗರ: ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನರ ನೋವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಸೂಕ್ತ ನೆರೆ ಪರಿಹಾರಕ್ಕೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ... ಹೆದ್ದಾರಿ ತಡೆದು ಆಕ್ರೋಶ - Bangalore-Mysore Highway
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಐಜೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ನಗರದ ಐಜೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿ ಪ್ರವಾಹ ಉಂಟಾಗಿದೆ. ಹಲವಾರು ಜನ ಮೃತಪಟ್ಟಿದ್ದಾರೆ. ನೆರೆ ಸಂತ್ರಸ್ತರು ಮನೆಯಿಲ್ಲದೇ ನಿರಾಶ್ರಿತರಾಗಿದ್ದಾರೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿಲ್ಲ. ರಾಜ್ಯ ಸರ್ಕಾರ ನೆರೆಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.
ಪ್ರಧಾನಿ ಮೋದಿ ನೆರೆ ಹಾವಳಿ ಪ್ರದೇಶಕ್ಕೆ ಕೂಡಲೇ ಭೇಟಿ ನೀಡಬೇಕು ಮತ್ತು ವಿಪತ್ತು ನಿರ್ವಣೆಗೆ 50 ಸಾವಿರ ಕೋಟಿ ರೂ. ನೆರವು ಘೋಷಿಸಿಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇಂದಿರಾ ಕ್ಯಾಂಟಿನ್ಗಳನ್ನು ಮುಚ್ಚುವ ಹುನ್ನಾರ ಮಾಡಿದ್ದಾರೆ. ಸಿಎಂ ದ್ವೇಷ ಬಿಟ್ಟು ಇಂದಿರಾ ಕ್ಯಾಂಟಿನ್ ಮುಚ್ಚವ ನಿರ್ಧಾರ ಕೈಬಿಡಬೇಕು. ಒಂದು ವೇಳೆ ಇಂದಿರಾ ಕ್ಯಾಂಟಿನ್ ಮುಚ್ವಿದರೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.