ಕರ್ನಾಟಕ

karnataka

ETV Bharat / state

ರಾಮನಗರ: ವೈದ್ಯಕೀಯ ಸಿಬ್ಬಂದಿಯನ್ನು ಕ್ವಾರಂಟೈನ್​ಗೆ ಒಳಪಡಿಸುವಂತೆ ಆಗ್ರಹ - coronavirus related news

ರಾಮನಗರ ತಾಲೂಕಿನ ಬನ್ನಿಕುಪ್ಪೆ ಆಸ್ಪತ್ರೆಯ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್​​​ಗೆ ಒಳಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

villagers-protest-against-doctors
ವೈದ್ಯರು, ಸಿಬ್ಬಂದಿಯನ್ನು ಕ್ವಾರಂಟೈನ್​ಗೆ ಒಳಪಡಿಸುವಂತೆ ಆಗ್ರಹ

By

Published : Jun 17, 2020, 4:07 PM IST

ರಾಮನಗರ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಬೇಕು ಎಂದು ಆಗ್ರಹಿಸಿ ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.

ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹೋಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಿ ಎಂದು ಒತ್ತಾಯಿಸಿದರು.

ಬನ್ನಿಕುಪ್ಪೆ ಬಳಿಯ ಲಕ್ಕೋಜನಹಳ್ಳಿ ಗ್ರಾಮದ ವೃದ್ಧೆಗೆ ವಿಕ್ಟೋರಿಯಾ ಆಸ್ಪತ್ರೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕವಾಗಿ ಬನ್ನಿಕುಪ್ಪೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯಾಧಿಕಾರಿ ಒಂದಿಬ್ಬರು ಸಿಬ್ಬಂದಿಯನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿದ್ದರು. ಉಳಿದವರನ್ನು ಕ್ವಾರಂಟೈನ್​​ಗೆ ಒಳಪಡಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ಗ್ರಾಮಸ್ಥರು

ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೊರೊನಾ ಸೋಂಕು ತಗಲುವ ಭೀತಿ ಎದುರಾಗಿದೆ. ಕೂಡಲೇ ವೈದ್ಯರು ಸೇರಿದಂತೆ ಸಿಬ್ಬಂದಿಯನ್ನು ಕ್ವಾರಂಟೈನ್​​ಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details