ರಾಮನಗರ: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು ಪಕ್ಷದ ಹೈಕಮಾಂಡ್ ನಿರ್ಧಾರದಿಂದ ಹಾಗೂ ವರಿಷ್ಠರ ತೀರ್ಮಾನದಿಂದ. ನಾವೆಲ್ಲ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯ ರಾಜಕಾರಣದಲ್ಲಿನ ಆರೋಪ-ಪ್ರತ್ಯಾರೋಪಗಳ ಬಗ್ಗೆ ನಾನು ಮಾತಾಡಲ್ಲ: ಡಿಕೆಶಿ
ರಾಜ್ಯದಲ್ಲಿ ಹೈಕಮಾಂಡ್ ತೀರ್ಮಾನದಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಲಾಗಿತ್ತು. ಪಕ್ಷದ ವರಿಷ್ಠರ ನಿರ್ಧಾರಕ್ಕೆ ತಲೆ ಬಾಗುತ್ತೇವೆ. ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ
ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ಪಟ್ಟಲದಮ್ಮ ದೇವಾಲಯದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ನಡೆದಿರುವ ಆರೋಪ, ಪ್ರತ್ಯಾರೋಪಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಎಲ್ಲರ ಕಷ್ಟ, ನೋವುಗಳನ್ನು ಎದುರಿಸುವ ಧೈರ್ಯವನ್ನು ದೇವಿ ಅನುಗ್ರಹಿಸಲಿ ಎಂದು ಪ್ರಶ್ನೆಯೊಂದಕ್ಕೆ ನಾಜುಕಾಗಿ ಉತ್ತರಿಸಿದರು.
ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರವಾದ ಬಗ್ಗೆ ಮಾತನಾಡಿದ ಅವರು, ಆದೇಶದ ಪ್ರತಿ ನನಗಿನ್ನೂ ಬಂದಿಲ್ಲ. ಅದು ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.