ರಾಮನಗರ :ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು. ಎಲ್ಲಿಯೂ ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.
ರಾಮನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ: ಐಜಿಪಿ ಶರತ್ ಚಂದ್ರ - ಐಜಿಪಿ ಶರತ್ ಚಂದ್ರ
ಮಾಜಿ ಸಚಿವ ಡಿ.ಕಿ.ಶಿವಕುಮಾರ್ ಬಂಧನ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ರಾಮನಗರ ಬಂದ್ಗೆ ಕರೆ ನೀಡಿದ್ದು, ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಡೆ ಶಾಂತಿಯುವ ವಾತಾವರಣವಿದೆ. ಕನಕಪುರ, ರಾಮನಗರ, ಚನ್ನಪಟ್ಟಣದಲ್ಲಿ ಯಾವುದೇ ಸಮಸ್ಯೆಯಿಲ್ಲ. ಕೆಲವೇ ಕೆಲವು ಅಂಗಡಿಗಳು ತೆರೆದಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.
ಬಂದ್ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಅವರೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದು, ತುರ್ತು ಸೇವೆಗಳಿಗೆ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ ಆದಷ್ಟು ಶೀಘ್ರವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಗುವುದು ಎಂದು ಹೇಳಿದ್ರು.