ರಾಮನಗರ: ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ಬಗ್ಗೆ ನನಗೆ ಏನು ಗೊತ್ತಿಲ್ಲ. ನಾನು ರಾಜಕೀಯ ವಿಚಾರವಾಗಿ ಮಾತನಾಡಲ್ಲ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ತಾಲೂಕಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಯಾರು ಹೇಳಿಲ್ಲ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ಬಗ್ಗೆ ನನಗೆ ಏನು ಗೊತ್ತಿಲ್ಲ: ಸಚಿವ ಸಿ.ಪಿ.ಯೋಗೇಶ್ವರ್ - Minister CP Yogeshwar
ಸಿಎಂ ಯಡಿಯೂರಪ್ಪ ಅವರ ಧ್ವನಿಯಲ್ಲಿಯೇ ಹೇಳಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನು ಮಾತನಾಡಲ್ಲ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಸಚಿವ ಸಿ.ಪಿ.ಯೋಗೇಶ್ವರ್
ಅರವಿಂದ್ ಬೆಲ್ಲದ್ ದೆಹಲಿ ಪ್ರವಾಸದ ಬಗ್ಗೆ ನನಗೆನೂ ಗೊತ್ತಿಲ್ಲ :ಸಚಿವ ಸಿ.ಪಿ.ಯೋಗೇಶ್ವರ್
ಅಲ್ಲದೆ, ಸಿಎಂ ಯಡಿಯೂರಪ್ಪ ಅವರ ಧ್ವನಿಯಲ್ಲಿಯೇ ಹೇಳಿದ್ದಾರೆ. ಮುಂದಿನ 2 ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಹಾಗಾಗಿ ಈ ವಿಚಾರವಾಗಿ ನಾನು ಮಾತನಾಡಲ್ಲ ಎಂದರು.
ಇದನ್ನೂ ಓದಿ:ಕೋವಿಡ್ ಕೇರ್ ಸೆಂಟರ್ನಲ್ಲಿ ಹೋಮ: ಜಿಲ್ಲಾಡಳಿತದಿಂದ ರೇಣುಕಾಚಾರ್ಯಗೆ ನೋಟಿಸ್!
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ನಾಯಕರು ಶಾಸಕರನ್ನು ಭೇಟಿಯಾಗಲು ಬರುತ್ತಿದ್ದಾರೆ. ನಾನು ಸಹ ಅವರನ್ನ ಭೇಟಿ ಮಾಡುತ್ತೇನೆ. ಸರ್ಕಾರ ಕೊಂಚ ವೇಗವಾಗಿ ನಡೆಯಲು ಬಯಸಿದ್ದೇನೆ ಎಂದು ಇದೇ ವೇಳೆ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.