ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಬಗ್ಗೆ ನಾನ್ಯಾಕೆ ಸಾಫ್ಟ್ ಕಾರ್ನರ್ ಆಗಲಿ : ಮಾಜಿ ಸಿಎಂ ಹೆಚ್​ಡಿಕೆ - ರಾಮನಗರದಲ್ಲಿ ಕಾಂಗ್ರೆಸ್​ ನಾಯಕರ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ಸರ್ಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ..

ಹೆಚ್​ಡಿಕೆ
ಹೆಚ್​ಡಿಕೆ

By

Published : Jun 24, 2022, 5:13 PM IST

Updated : Jun 24, 2022, 6:00 PM IST

ರಾಮನಗರ :ಕಾಂಗ್ರೆಸ್ ಬಗ್ಗೆ ನಾನ್ಯಾಕೆ ಸಾಫ್ಟ್ ಕಾರ್ನರ್ ಆಗಲಿ. ಅವರ ರೀತಿ ನಾನು ಬೀದಿಲಿ ಬ್ಯಾರಿಕೇಡ್ ಹತ್ತಿ ಡ್ಯಾನ್ಸ್ ಮಾಡೋಕೆ ಹೋಗ್ಬೇಕಾ? ಎಂದು ಕಾಂಗ್ರೆಸ್ ನಾಯಕರ ವಿರುದ್ದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ರಾಮನಗರ ‌ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಅವರ ಪಕ್ಷದಲ್ಲಿ‌ ಇರುವಂತಹ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜೊತೆ ರಾಜಿಯಾಗಲಿ, ಅನುಕಂಪದ ಪ್ರಶ್ನೆ ಅಲ್ಲ. ಈ ವ್ಯವಸ್ಥೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ.

ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಅವರು ಮಾತನಾಡಿರುವುದು

ಸ್ವಾಯತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡ್ತಿವೆ ಎಂಬುದನ್ನ ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಓಲೈಸಿಕೊಳ್ಳಲು ನಾನು ಹೇಳಿಲ್ಲ. ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೇ ನನಗೆ ಫೋನ್ ಮಾಡಿ ಶಹಬ್ಬಾಸ್‌ಗಿರಿ ಹೇಳಿದ್ರು ಎಂದರು.

ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಕಾಮನ್‌ಸೆನ್ಸ್ ಬಗ್ಗೆ ಮಾತನಾಡಿದ್ದೀರಿ ಎಂದು ಹೇಳಿದ್ರು. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್‌ನವರು. ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೇ ಇಲ್ಲ. ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇವೆ.

ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡ್ತೇವೆ. ಹಾಗೆಯೇ, ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ ಎಂದು ಹೆಚ್​ಡಿಕೆ ತಿಳಿಸಿದರು‌.

ಶಾಸಕರನ್ನ ಹೈಜಾಕ್ ಮಾಡಿ ಕರೆದೊಯ್ದಿದ್ದಾರೆ :ಮಹಾರಾಷ್ಟ್ರದಲ್ಲಿ ಸರ್ಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಎಂಎಲ್ಎಗಳನ್ನ ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ.

ಕರ್ನಾಟಕದ ಸರ್ಕಾರ ನಡೆಯುತ್ತಿದ್ದಾಗ ಮುಂಬೈಗೆ ಕರೆದೊಯ್ದಿದ್ದರು. ಕರ್ನಾಟಕದ ನೆನಪು ಮತ್ತೇನು ಕಾಣುತ್ತಿದೆ.‌ ಶಾಸಕರು ಹೋಗಬೇಕಾದರೆ ಯಾವ ಆಮಿಷಗಳು ಇರುತ್ತದೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ, ಕಾರಣಗಳು ಬೇರೆ ಬೇರೆ ಕೊಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸುವಂತದ್ದು ಮಾರಕ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ನಡೆಯಾಗಿದೆ. ಯಾರ ಸರ್ಕಾರ ಇರಬಾರದೆಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಒಳಗೊಂಡಂತೆ ಎಲ್ಲಾ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ. ಮುಂದಿನ ದಿನಗಳಲ್ಲಿ ಅವರಿಗೆ ಬೂಮ್‌ರಾಂಗ್ ಆಗಲಿದೆ ಎಂದು ಇದೇ ಮಹಾರಾಷ್ಟ್ರ ಬೆಳವಣಿಗೆಗಳ ಬಗ್ಗೆ ಮಾಜಿ ಸಿಎಂ ಹೆಚ್‌ಡಿಕೆ ಕಿಡಿಕಾರಿದರು.

ಡೆವಲಪ್​ಮೆಂಟ್​ ನಡೆಯುತ್ತದೆ : ಇನ್ನು ಶಿವಸೇನೆಯ ನಾಯಕ ಏಕನಾಥ್ ಶಿವಶಿಂಧೆ ಏನೇ ಹೇಳಲಿ. ಏಕನಾಥ್ ಶಿಂಧೆ ಶಿವಸೇನೆ ನಮ್ಮದೆಂದು ಕ್ಲೈಮ್ ಮಾಡಬಹುದು. ಸಂಖ್ಯಾಬಲದ ಆಧಾರದ ಮೇಲೆ ಅವರು ಕ್ಲೈಮ್ ಮಾಡಬಹುದು. ಚುನಾವಣೆಗೆ ಹೋದಾಗ ಡೆವಲಪ್​ಮೆಂಟ್​ ನಡೆಯುತ್ತದೆ. ಅವತ್ತು ಚರ್ಚೆ ಆಗುತ್ತದೆ. ಶಿವಸೇನೆಯ ಸಂಸ್ಥಾಪಕರು ಮತ್ತು ಯಾರು ಯಾರು ದೇಣಿಗೆ ನೀಡಿದ್ದಾರೆ. ಕಾರ್ಯಕರ್ತರು ಯಾರ ಜೊತೆಗೆ ನಿಲ್ಲುತ್ತಾರೆ. ಇವೆಲ್ಲದರ ಮೇಲೆ ಮುಂದಿನ ಬೆಳವಣಿಗೆ ತೀರ್ಮಾನವಾಗುತ್ತದೆಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.

ಓದಿ:ಸಿಬಿಐನಿಂದ ಹೊಸ ನೋಟಿಸ್ : ಜುಲೈ 1ಕ್ಕೆ ನ್ಯಾಯಾಲಯಕ್ಕೆ ಹಾಜರಾಗುತ್ತೇನೆ ಎಂದ ಡಿಕೆಶಿ

Last Updated : Jun 24, 2022, 6:00 PM IST

For All Latest Updates

TAGGED:

ABOUT THE AUTHOR

...view details