ರಾಮನಗರ: ಚನ್ನಪಟ್ಟಣ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಒಂಟಿಸಲಗ ದಾಳಿಗೆ ಸಿಲುಕಿ ವ್ಯಕ್ತಿ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದು, ಒಂಟಿ ಸಲಗದ ದಾಳಿಗೆ ಹಸು ಸಾವು ಸಾವನಪ್ಪಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ಮಾಡಿದ್ದು. ಒಂಟಿಸಲಗದ ದಾಳಿಗೆ ಹಸು ಸಾವನ್ನಪ್ಪಿದ್ದು, ಜಮೀನಿಗೆ ತೆರಳಿದ್ದ ರೈತ ಗೋಪಾಲ್ ಎನ್ನುವವರ ಕಾಲು ಮುರಿದಿದೆ. ರೈತರ ಕೃಷಿ ಜಮೀನಿನ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗಳು ಈಗ ಜನವಸತಿ ಪ್ರದೇಶದಲ್ಲೇ ಮನುಷ್ಯನ ಮೇಲೆ ಮತ್ತು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿರುವುದು ಈ ಭಾಗದ ರೈತರಲ್ಲಿ ಆತಂಕಕ್ಕೆ ಉಂಟುಮಾಡಿದೆ. ಒಂಟಿ ಸಲಗದ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಹಸು ನರಳಿ ಸ್ಥಳದಲ್ಲೇ ಸಾವನಪ್ಪಿದ್ದು, ಗಾಯಾಳು ಗೋಪಾಲ್ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಬೇಟಿ ನೀಡಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡಸಿದ್ದು, ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದ್ದರು ಆನೆ ದಾಳಿ ತಡೆಯಲು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಬ್ಬರನ್ನು ಬಲಿ ಪಡೆದ ಹುಲಿ ಬೆಚ್ಚಿಬಿದ್ದ ಜನ : ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣ ಪತ್ತೆ ಮುನ್ನಲೆಗೆ ಬಂದಿದೆ. 24 ಗಂಟೆಗಳಲ್ಲಿ ಹುಲಿಯೊಂದು ಇಬ್ಬರನ್ನು ಬಲಿ ಪಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಮತ್ತು ಮೊಮ್ಮಗನ ಶವ ನೋಡಲು ಬಂದ ತಾತನನ್ನು ಹುಲಿ ಬಲಿ ಪಡೆದಿರುವ ಘಟನೆ ಫೇ.13ರಂದು ನಡೆದಿದೆ.