ರಾಮನಗರ:ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ರಾಮನಗರ ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಡಿಯೋಗಳನ್ನು ಇಟ್ಟುಕೊಂಡು ಸ್ವಾಮೀಜಿಗೆ ಆರೋಪಿಗಳು ಹೆದರಿಸಿರುವ ಅನುಮಾನ ವ್ಯಕ್ತವಾಗಿದೆ. ಅವರ ಮೊಬೈಲ್ನಲ್ಲಿ ಕೆಲ ವಿಡಿಯೋಗಳು ಕೂಡ ಸಿಕ್ಕಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ. ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.
(ಓದಿ: ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣ.. 6 ಪುಟದ ಡೆತ್ನೋಟ್ ಬಗ್ಗೆ ಪೊಲೀಸರಿಂದ ಮಾಹಿತಿ)