ಕರ್ನಾಟಕ

karnataka

ETV Bharat / state

ಕ್ಷುಲ್ಲಕ ಕಾರಣಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ - ರಾಮನಗರದಲ್ಲಿ ಮಹಿಳೆ ಆತ್ಮಹತ್ಯೆ

ರಾಯರದೊಡ್ಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವನಂಜ ಹಾಗೂ ಶ್ವೇತಾ ದಂಪತಿ ಈ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದು, ದಿನನಿತ್ಯ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ..

woman-commits-suicide-for-trivial-reason-in-ramanagara
ಕ್ಷುಲ್ಲಕ ಕಾರಣಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

By

Published : Mar 22, 2022, 4:43 PM IST

ರಾಮನಗರ : ದೇವರ ಪ್ರಸಾದ ತರಲಿಲ್ಲ ಎಂದು ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯರದೊಡ್ಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶ್ವೇತಾ (27) ಎಂದು ಗುರುತಿಸಲಾಗಿದೆ.

ಶ್ವೇತಾ ಅವರ ಪತಿ ಶಿವನಂಜ ಮಗನೊಂದಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದರು. ದೇವಾಲಯಕ್ಕೆ ಹೋದರೂ ತನಗೆ ಪ್ರಸಾದ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ರಾಯರದೊಡ್ಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವನಂಜ ಹಾಗೂ ಶ್ವೇತಾ ದಂಪತಿ ಈ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದು, ದಿನನಿತ್ಯ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ರಾಮನಗರದ ಐಜೂರು ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಓದಿ :ರಸ್ತೆ ಅಪಘಾತ ಕಂಡ ವಿದ್ಯಾರ್ಥಿ ಹೃದಯಾಘಾತದಿಂದ ಸಾವು; ಗಾಯಾಳು ಸವಾರ ಪ್ರಾಣಾಪಾಯದಿಂದ ಪಾರು!

ABOUT THE AUTHOR

...view details