ಕರ್ನಾಟಕ

karnataka

ETV Bharat / state

ರಾಮನಗರ: ಹಾವು ಕಚ್ಚಿ ಮಹಿಳೆ ಸಾವು - Woman died by snake bite in ramanagara

ಮನೆ ಹಿತ್ತಲಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳೆಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಈ ಘಟನೆ ರಾಮನಗರದಲ್ಲಿ ನಡೆದಿದೆ.

ಹಾವು ಕಚ್ಚಿ ಮಹಿಳೆ ಸಾವು
ಹಾವು ಕಚ್ಚಿ ಮಹಿಳೆ ಸಾವು

By

Published : Sep 13, 2022, 4:43 PM IST

ರಾಮನಗರ:ತಾಲೂಕಿನ ಕೈಲಾಂಚ ಹೋಬಳಿಯ ನಾಗೋಹಳ್ಳಿ ಗ್ರಾಮದಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆಶಾ ರಾಣಿ (33) ಎಂಬುವವರು ಮನೆ ಹಿತ್ತಲಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಹಾವು ಕಚ್ಚಿದೆ.

ಬಳಿಕ ನೋವು ಭಯದಿಂದ ಕಿರುಚಿ ಹಿತ್ತಲಿನಿಂದ ಮನೆ ಮುಂಭಾಗ ಓಡಿ ಬಂದಿದ್ದಾರೆ. ಕೂಡಲೇ ಅಕ್ಕಪಕ್ಕದ ಜನರು ವಾಹನದಲ್ಲಿ ಕೈಲಾಂಚ ಆಸ್ಪತ್ರೆಯತ್ತ ಅವರನ್ನು ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಸಿಗದ ಹಿನ್ನೆಲೆ ರಾಮನಗರ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆಶಾ ರಾಣಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.

ಇದನ್ನೂ ಓದಿ:ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಮಹಿಳೆ ಸಾವು

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದು, ಒಬ್ಬ ಮಗ 9 ನೇ ತರಗತಿ, ಮೊತ್ತೋರ್ವ ಮಗಳು 6 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಪತಿ ಪೇಂಟ್​​ ಕೆಲಸ ಮಾಡುತ್ತಾರೆ. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ತಾಯಿ‌‌ ಕಳೆದುಕೊಂಡು ತಬ್ಬಲಿಯಾಗಿವೆ.

ABOUT THE AUTHOR

...view details