ರಾಮನಗರ:ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಆನೆಹೊಸಳ್ಳಿ ಗ್ರಾಮದಲ್ಲಿಂದು ನಡೆದಿದೆ. ಸಾವಿಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪ್ರಕರಣದ ಹಿಂದೆ ಸಾಕಷ್ಟು ಅನುಮಾನಗಳು ಮೂಡಿವೆ.
ರಾಮನಗರ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ - ಎರಡು ಪ್ರತ್ಯೇಕ ತಂಡಗಳನ್ನು ರಚಿಸಿರುವ ಪೊಲೀಸರು
ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದ ಘಟನೆ ಹಾರೋಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಮೃತದೇಹದ ಮೈಮೇಲೆ ಒಳಉಡುಪು ಬಿಟ್ಟರೆ ಬೇರಾವುದೇ ಬಟ್ಟೆಗಳು ಇರಲಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸಿರುವ ದುಷ್ಕರ್ಮಿಗಳು ಯುವಕನನ್ನು ವಿವಸ್ತ್ರಗೊಳಿಸಿ ಕೃತ್ಯ ಎಸಗಿರುನ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿ ಹಾರೋಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಲಿಂಗಕಾಮ ಅಥವಾ ಹುಡುಗಿಯ ವಿಚಾರಕ್ಕೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ.
ಇದನ್ನೂ ಓದಿ:ವಿಜಯಪುರ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು, ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿ