ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಗ್ರಾಮವೊಂದರಲ್ಲಿ ಯುವಕನೊಬ್ಬ ಅತ್ಯಾಚಾರ ವೆಸಗಿದ್ದರಿಂದ ಅಪ್ರಾಪ್ತ ಬಾಲಕಿ ಅಸ್ವಸ್ಥಳಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಯುವಕನ ಅತ್ಯಾಚಾರ ಕೃತ್ಯಕ್ಕೆ ಅಪ್ರಾಪ್ತ ಬಾಲಕಿ ಬಲಿ? - young man raped minor girl
ಯುವಕನ ಅತ್ಯಾಚಾರ ಕೃತ್ಯಕ್ಕೆ ಬಾಲಕಿ ಬಲಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
![ಯುವಕನ ಅತ್ಯಾಚಾರ ಕೃತ್ಯಕ್ಕೆ ಅಪ್ರಾಪ್ತ ಬಾಲಕಿ ಬಲಿ? Rape case](https://etvbharatimages.akamaized.net/etvbharat/prod-images/1200-675-18084237-thumbnail-16x9-bgdk.jpg)
ಅತ್ಯಾಚಾರ ಪ್ರಕರಣ
ಮನೆಯಲ್ಲಿ ಯಾರು ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮನೆಗೆ ಯುವಕ ತೆರಳಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾಳೆ. ಕಗ್ಗಲೀಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಇದನ್ನೂಓದಿ:ಗಂಗಾವತಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 60ಲಕ್ಷ ಹಣ, ಕಾರು ವಶಕ್ಕೆ ಪಡೆದ ಪೊಲೀಸರು..