ಶಿವಮೊಗ್ಗ: ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರು ಹಾಗೂ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ.
ಶಿವಮೊಗ್ಗ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 115 ವಾಹನ ಜಪ್ತಿ - ಲಾಕ್ ಡೌನ್ ನಿಯಮ ಉಲ್ಲಂಘನೆ 115 ವಾಹನ ಜಪ್ತಿ
ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 115 ವಾಹನಗಳನ್ನು (108 ದ್ವಿಚಕ್ರ ವಾಹನ, 07 ಕಾರು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 141 ಪ್ರಕರಣಗಳ ದಾಖಲಾಗಿದ್ದು, 55,800 ರೂ. ದಂಡವನ್ನು ಪೊಲೀಸರು ವಸೂಲಿ ಮಾಡಿದ್ದಾರೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದ 115 ವಾಹನ ಜಪ್ತಿ
ಲಾಕ್ ಡೌನ್ ವೇಳೆ ತೆರೆದಿದ್ದ ಅಂಗಡಿಯೊಂದರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನುಳಿದಂತೆ, ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 115 ವಾಹನಗಳನ್ನು (108 ದ್ವಿಚಕ್ರ ವಾಹನ, 07 ಕಾರು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 141 ಪ್ರಕರಣಗಳ ದಾಖಲಾಗಿದ್ದು, 55,800 ರೂ. ದಂಡವನ್ನು ಪೊಲೀಸರು ವಸೂಲಿ ಮಾಡಿದ್ದಾರೆ.