ಶಿವಮೊಗ್ಗ:12ನೇ ಶತಮಾನದಲ್ಲಿ ಮೂಢನಂಬಿಕೆ ಹಾಗೂ ಜಾತಿ ಪದ್ಧತಿಯ ವಿರುದ್ಧ ವಚನಗಳ ಮೂಲಕ ಜನ ಜಾಗೃತಿ ಮೂಡಿಸಿದ್ದ ವಚನಕಾರರ ಕೊಡುಗೆ ಅಪಾರವಾದದ್ದು ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಅಭಿಪ್ರಾಯಪಟ್ಟರು.
ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಯೋಜಿಸಿದ್ದ 'ಕಾಯಕ ಶರಣರ ಜಯಂತಿ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣ, ಅಕ್ಕಮಹಾದೇವಿ ಸೇರಿದಂತೆ ಅನೇಕ ವಚನಕಾರರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದ್ದರು. ಅವರ ಸಾಮಾಜಿಕ ಕಳಕಳಿ ಕಾರ್ಯದಿಂದ ಹನ್ನೆರಡನೇ ಶತಮಾನ ಬಹಳ ಮಹತ್ವದ ಶತಮಾನ ಎಂದರು.