ಶಿವಮೊಗ್ಗ:ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ಉಂಟಾದ ಹಿನ್ನಲೆಯಲ್ಲಿ ನಗರದಲ್ಲಿ ಹಾಕಿದ್ದ 144 ಸೆಕ್ಷನ್ ರದ್ದು ಮಾಡಲಾಗಿದೆ. ಎರಡು ದಿನಗಳ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಕರಣ ಸಂಬಂಧ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದರಿಂದ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.
144 ಸೆಕ್ಷನ್ ಇಂದಿಗೆ ಮುಕ್ತಾಯವಾಗಿದೆ. ನಿನ್ನೆ ಪೊಲೀಸರು ಪಥಸಂಚಲನ ನಡೆಸಿದ್ದರು. ಅಲ್ಲಲ್ಲಿ ಚೆಕ್ ಪೂಸ್ಟ್ ನಿರ್ಮಾಣ ಮಾಡಲಾಗಿದ್ದು, ಇಂದು ಸಹ ಪೊಲೀಸ್ ಬಂದೂ ಬಸ್ತ್ ಮಂದುವರೆಸಲಾಗಿದೆ.