ಶಿವಮೊಗ್ಗ:ನಗರದಲ್ಲಿ ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ-2020 ಅಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಅನಗತ್ಯವಾಗಿ ಓಡಾಡುತ್ತಿದ್ದ 152 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ: 152 ವಾಹನ ಜಪ್ತಿ, 1.26 ಲಕ್ಷ ದಂಡ ವಸೂಲಿ - ಶಿವಮೊಗ್ಗ ಲಾಕ್ಡೌನ್ ಉಲ್ಲಂಘಿಸಿದ ವಾಹನ ಜಪ್ತಿ
ಶಿವಮೊಗ್ಗದಲ್ಲಿ ಕರ್ಫ್ಯೂ ನಿಯಮ ಉಲ್ಲಂಘಿಸಿದ 152 ವಾಹನ ಜಪ್ತಿ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ದಂಡ ವಸೂಲಿ ಮಾಡಲಾಗಿದೆ.

ಶಿವಮೊಗ್ಗ: 152 ವಾಹನ ಜಪ್ತಿ, 1.26 ಲಕ್ಷ ದಂಡ ವಸೂಲಿ
ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ 137 ದ್ವಿಚಕ್ರ ವಾಹನ ಮತ್ತು 15 ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಟ್ಟು 280 ಪ್ರಕರಣಗಳನ್ನು ದಾಖಲಿಸಿ 1,26,700 ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಮುದ್ದೇಬಿಹಾಳದಲ್ಲಿ ಯುವತಿಯ ಬರ್ಬರ ಕೊಲೆ: ಸೇತುವೆ ಕೆಳಗಡೆ ಮೃತದೇಹ ಪತ್ತೆ!