ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ 179 ಕೊರೊನಾ ಪಾಸಿಟಿವ್ ಕೇಸ್ ಪತ್ತೆ, 3 ಸಾವು - Shimoga corona latest news

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಹೊಸದಾಗಿ 179 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ 35 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Shimoga
Shimoga

By

Published : Aug 20, 2020, 8:30 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 179 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5236 ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಸೋಂಕಿತರ ವಿವರ :
ಶಿವಮೊಗ್ಗ-114, ಭದ್ರಾವತಿ-31, ಶಿಕಾರಿಪುರ-11, ತೀರ್ಥಹಳ್ಳಿ-01, ಹೊಸನಗರ-02, ಸೊರಬ-07, ಸಾಗರ-06 ಸೇರಿದಂತೆ ಬೇರೆ ಜಿಲ್ಲೆಯಿಂದ 07 ಜನ ಸೋಂಕಿತರು ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಸೋಂಕಿಗೆ ಮೂರು ಜನ ಬಲಿಯಾಗಿದ್ದು, ಇಲ್ಲಿಯವರೆಗೆ 84 ಜನ ಸಾವನ್ನಪ್ಪಿದ್ದಾರೆ.

ಇಂದು 35 ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ 2,985 ಜನ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,167 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 239 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 1,053 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 252 ಜನ ಇದ್ದಾರೆ. ಮನೆಯಲ್ಲಿ 525 ಜನ ಐಸೊಲೇಷನ್ ನಲ್ಲಿದ್ದಾರೆ. ಆಯುರ್ವೇದಿಕ್‌ ಕಾಲೇಜಿನಲ್ಲಿ 98 ಜನ ಇದ್ದಾರೆ.

ಜಿಲ್ಲೆಯಲ್ಲಿ ಕಂಟೈನ್‌ಮೆಂಟ್‌ ಝೋನ್ ಸಂಖ್ಯೆ 2,113ಕ್ಕೆ ಏರಿಕೆಯಾಗಿದೆ. ಇದರಲ್ಲಿ‌ 735 ಝೋನ್ ವಿಸ್ತರಣೆಯಾಗಿದೆ.
ಕೋವಿಡ್ ಪರೀಕ್ಷೆ ವಿವರ:
ಜಿಲ್ಲೆಯಲ್ಲಿ ಇಂದು 1,797 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 1,082 ಜನರ ವರದಿ ಬಂದಿದೆ. ಇದುವರೆಗೂ ಜಿಲ್ಲೆಯಲ್ಲಿ 47,522 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ‌ 36,980 ಜನರ ವರದಿ ಬಂದಿದೆ.

ABOUT THE AUTHOR

...view details