ಕರ್ನಾಟಕ

karnataka

ETV Bharat / state

ಕರ್ಫ್ಯೂ ನಿಯಮ ಉಲ್ಲಂಘಿಸಿದವರ ವಿರುದ್ಧ 191 ಪ್ರಕರಣ ದಾಖಲು - ಕರ್ನಾಟಕ ಕೊವಿಡ್ ಅಪ್​ಡೇಟ್

ಕೊರೊನಾ ಕರ್ಫ್ಯೂ ಜಾರಿಯಲ್ಲಿದ್ದರೂ ಅನಗತ್ಯವಾಗಿ ಕೆಲವರು ಓಡಾಡುತ್ತಿದ್ದು, ಅಂತವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

police
police

By

Published : May 7, 2021, 5:16 AM IST

ಶಿವಮೊಗ್ಗ: ಕೊರೊನಾ ಕರ್ಫ್ಯೂ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ 191 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಾಂತ್​ರಾಜ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ 04 ಪ್ರಕರಣಗಳನ್ನು ದಾಖಲಿಸಲಾಗಿದೆ ಹಾಗೂ ಸರ್ಕಾರದ ನಿಯಮ ಉಲ್ಲಂಘನೆ ಮಾಡ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 108 ವಾಹನಗಳನ್ನು (94 ದ್ವಿಚಕ್ರ ವಾಹನ ಮತ್ತು 14 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ.

ಐಎಂವಿ ಕಾಯ್ದೆ ಅಡಿಯಲ್ಲಿ ಒಟ್ಟು 191 ಪ್ರಕರಣಗಳನ್ನು ದಾಖಲಿಸಿ 84,500 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಕೊರೊನಾ ಕರ್ಫ್ಯೂ ಜಾರಿಯಲ್ಲಿದ್ದರೂ ಅನಗತ್ಯವಾಗಿ ಕೆಲವರು ಓಡಾಡುತ್ತಿದ್ದು, ಅಂತವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ABOUT THE AUTHOR

...view details