ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಒಂದೇ ದಿನ 210 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,057 ಕ್ಕೆ ಏರಿಕೆಯಾಗಿದೆ. ಇಂದು 96 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 1,827 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದು 3 ಜನ ಕೊರೊನಾದಿಂದ ಸಾವನ್ನಪ್ಪಿದ್ದು, ಇದರಿಂದ ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 1,168 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 222 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ನಲ್ಲಿ 480 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 169 ಜನ, ಮನೆಯಲ್ಲಿ 192 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಯವೇದಿಕ್ ಕಾಲೇಜಿನಲ್ಲಿ 105 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 1,206 ಕಂಟೇನ್ಮೆಂಟ್ ಝೋನ್ ಮಾಡಲಾಗಿದೆ.