ಶಿವಮೊಗ್ಗ: ಜಿಲ್ಲೆಯಲ್ಲಿ 237 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಶಿವಮೊಗ್ಗ-128, ಭದ್ರಾವತಿ-38, ಶಿಕಾರಿಪುರ-29, ತೀರ್ಥಹಳ್ಳಿ-05, ಸೊರಬ-09, ಸಾಗರ-09, ಹೊಸನಗರ-12, ಬೇರೆ ಜಿಲ್ಲೆಯಿಂದ ಆಗಮಿಸಿದ್ದ 07 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,501 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರ ವಿವರ:
ಇಂದು ಜಿಲ್ಲೆಯಲ್ಲಿ ಸೋಂಕಿಗೆ ಐದು ಜನರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ 116 ಜನ ಮೃತಪಟ್ಟಿದ್ದಾರೆ.
ಗುಣಮುಖರಾದವರ ಮಾಹಿತಿ:
ಜಿಲ್ಲೆಯಲ್ಲಿಂದು ಸುಮಾರು 314 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 4,556 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 1,338 ಸಕ್ರಿಯ ಪ್ರಕರಣಗಳಿವೆ.
ಚಿಕಿತ್ಸೆ ಪಡೆಯುತ್ತಿರುವವರ ವಿವರ:
ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 172 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 141 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 222 ಜನ ಇದ್ದಾರೆ. ಮನೆಯಲ್ಲಿ 766 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯವೇದಿಕ್ ಕಾಲೇಜಿನಲ್ಲಿ 37 ಜನ ಇದ್ದಾರೆ.
ಜಿಲ್ಲೆಯಲ್ಲಿ ಕಂಟೈನ್‌ಮೆಂಟ್ ಝೋನ್ ಸಂಖ್ಯೆ 2,752 ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 1,103 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 989 ಜನರ ವರದಿ ಬಂದಿದೆ.