ಶಿವಮೊಗ್ಗ:ಜಿಲ್ಲೆಯಲ್ಲಿ ಇಂದು 240 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,476ಕ್ಕೆ ಏರಿಕೆಯಾಗಿದೆ.
ಇಂದು 125 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 3,110 ಜನ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 4 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೂ ಜಿಲ್ಲೆಯಲ್ಲಿ 88 ಜನ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,278 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಗ್ಗಾನ್ ಕೋವಿಡ್ ಅಸ್ಪತ್ರೆಯಲ್ಲಿ 246 ಜನ, ಕೋವಿಡ್ ಕೇರ್ ಸೆಂಟರ್ ನಲ್ಲಿ 1,074, ಖಾಸಗಿ ಆಸ್ಪತ್ರೆಯಲ್ಲಿ 249 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ 592 ಜನ ಐಸೋಲೇಷನ್ನಲ್ಲಿದ್ದಾರೆ. ಆರ್ಯವೇದಿಕ್ ಕಾಲೇಜಿನಲ್ಲಿ 117 ಮಂದಿ ಇದ್ದಾರೆ.