ಶಿವಮೊಗ್ಗ:ಜನತಾ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿದ 247 ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ 71 ದ್ವಿಚಕ್ರ ವಾಹನಗಳು, 9 ಕಾರುಗಳು ಹಾಗು 21 ಆಟೋಗಳು ಸೇರಿ 101 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.