ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು 247 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ಸೊಂಕಿತರ ಸಂಖ್ಯೆ 7.823 ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 204 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 5.429 ಜನ ಗುಣಮುಖರಾದಂತಾಗಿದೆ. ಅಲ್ಲದೆ ಇಂದು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 185 ಜನ ಸೊಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 195 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 250 ಜನ ಇದ್ದಾರೆ. ಮನೆಯಲ್ಲಿ 1119 ಜನ ಐಸೋಲೇಷನ್ನಲ್ಲಿದ್ದಾರೆ. ಆಯುರ್ವೇದಿಕ್ ಕಾಲೇಜಿನಲ್ಲಿ 19 ಜನ ಇದ್ದಾರೆ.