ಶಿವಮೊಗ್ಗ:ಅಬಕಾರಿ ಇಲಾಖೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.
ಶಿಕಾರಿಪುರದಲ್ಲಿ ಅಕ್ರಮ ಗಾಂಜಾ ವಶ: ಆರೋಪಿ ಅರೆಸ್ಟ್ - ಅಕ್ರಮ ಗಾಂಜಾ ವಶ
ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, 25 ಸಾವಿರ ರೂ. ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಅಬ್ಬಾಸ್ಸಾಬ್ ಬಿನ್ ಬುಡನ್ ಸಾಬ್ ಎಂಬಾತ ಬಂಧಿತ ಆರೋಪಿ. ಈತ ಮನೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದ ಸುಮಾರು 25 ಸಾವಿರ ರೂ. ಮೌಲ್ಯದ 20 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ವೈ ಆರ್ ಮೋಹನ್ ತಿಳಿಸಿದ್ದಾರೆ.
ಅಬಕಾರಿ ಉಪ ಆಯುಕ್ತರ ಸೂಚನೆ ಮೇರೆಗೆ ಶಿವಮೊಗ್ಗ ಅಬಕಾರಿ ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕ ಮೈಲಾನಾಯ್ಕ್ ನೇತೃತ್ವದಲ್ಲಿ ಮಂಜುನಾಥ್, ಎ.ಟಿ. ರಾಜಮ್ಮ, ಎಸ್.ಡಿ. ಚಂದ್ರಪ್ಪ, ಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.