ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ 289 ವಾಹನ ಜಪ್ತಿ, 93 ಸಾವಿರ ರೂ. ದಂಡ ವಸೂಲಿ - ಶಿವಮೊಗ್ಗದಲ್ಲಿ 289 ವಾಹನ ಜಪ್ತಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ 289 ವಾಹನಗಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Shivamogga
ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಜಪ್ತಿ

By

Published : May 15, 2021, 7:55 AM IST

ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಆದರೂ ಸರ್ಕಾರದ ಆದೇಶ ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ THE KARNATAKA EPIDEMIC DISEASES ACT 2020 ಕಾಯ್ದೆಯ ಅಡಿಯಲ್ಲಿ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 289 ವಾಹನಗಳನ್ನು (267-ದ್ವಿ ಚಕ್ರ ವಾಹನ, 2 ಆಟೋ ಹಾಗೂ 20 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 222 ಪ್ರಕರಣಗಳನ್ನು ದಾಖಲಿಸಿ,ರೂ.93,700 ದಂಡ ವಸೂಲಿ ಮಾಡಲಾಗಿದೆ.

ABOUT THE AUTHOR

...view details