ಶಿವಮೊಗ್ಗ: ಸಿಎಂ ತವರು ಜಿಲ್ಲೆಯಲ್ಲಿ ಇಂದು 3 ಮಂಂದಿ ಕೊರೊನಾಗೆ ಬಲಿಯಾಗಿದ್ದು, ಸೋಂಕಿಗೆ ಒಳಗಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ ಕೊರೊನಾಗೆ ಮೂವರು ಬಲಿ... ಮೃತರ ಸಂಖ್ಯೆ 22ಕ್ಕೆ ಏರಿಕೆ
ಮಹಾಮಾರಿ ಕೊರೊನಾಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲದ 69 ವರ್ಷದ ವೃದ್ಧೆ, ಬಾಪೂಜಿ ನಗರದ 65 ವರ್ಷದ ವೃದ್ಧೆ, ಭದ್ರಾವತಿಯ 65 ವರ್ಷದ ವೃದ್ಧ ಸಾವನಪ್ಪಿದ್ದು, ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಇಂದು ಶಿವಮೊಗ್ಗದಲ್ಲಿ ಇಬ್ಬರು ಹಾಗೂ ಭದ್ರಾವತಿಯ ಓರ್ವ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಲಷ್ಕರ್ ಮೊಹಲ್ಲದ 69 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ಬಾಪೂಜಿ ನಗರದ 65 ವರ್ಷದ ವೃದ್ಧೆ ಮನೆಯಲ್ಲಿಯೇ ಸಾವನ್ನಪ್ಪಿದ್ದರು. ಇವರು ತಮ್ಮ ಮನೆ ಬಳಿಯೇ ತರಕಾರಿ ಅಂಗಡಿ ನಡೆಸುತ್ತಿದ್ದರು. ಮೃತರ ಕೊರೊನಾ ಪರೀಕ್ಷೆ ನಡೆಸಿದಾಗ ಇವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಇವರ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.
ಭದ್ರಾವತಿಯ 65 ವರ್ಷದ ವೃದ್ಧ ಸಹ ಕೋವಿಡ್ಗೆ ಬಲಿಯಾಗಿದ್ದಾರೆ. ಇದರಿಂದ ಇಂದು ಜಿಲ್ಲೆಯಲ್ಲಿ ಸೋಂಕಿನಿಂದ 3 ಸಾವು ಸಂಭವಿಸಿದ್ದು, ಈವರೆಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.