ಕರ್ನಾಟಕ

karnataka

ETV Bharat / state

ಶಿಕಾರಿಪುರ: ಭೀಕರ ಅಪಘಾತದಲ್ಲಿ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು - Shivamogga bike accident

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತ
road accident

By

Published : Nov 7, 2022, 10:01 AM IST

ಶಿವಮೊಗ್ಗ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪ ಕಳೆದ ರಾತ್ರಿ ನಡೆದಿದೆ.

ಶಿಕಾರಿಪುರ ತಾಲೂಕಿನ ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು. ಶಿರಾಳಕೊಪ್ಪದಿಂದ ಹುಲುಗಿನಕೊಪ್ಪದಲ್ಲಿರುವ ಮನೆಗೆ ಮಲ್ಲಿಕಾರ್ಜನ ಅವರು ಮಗಳು ಸೌಜನ್ಯ, ಪತ್ನಿ ಜ್ಯೋತಿ, ತಾಯಿ ಗಂಗಮ್ಮ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ಹಿರೇಕೆರೂರು ಕಡೆಯಿಂದ ಶಿರಾಳಕೊಪ್ಪ ಮಾರ್ಗವಾಗಿ ಕಾರು ತೆರಳುತ್ತಿತ್ತು.

ಇದನ್ನೂ ಓದಿ:ಸ್ಕೂಟರ್‌ಗೆ ಲಾರಿ ಡಿಕ್ಕಿ: ಮಂಗಳೂರಿನಲ್ಲಿ ಇಬ್ಬರು ಸಾವು, ಮಕ್ಕಳಿಬ್ಬರಿಗೆ ಗಾಯ

ಅಪಘಾತದ ರಭಸಕ್ಕೆ ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಜ್ಯೋತಿ ಮೃತಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಗಂಗಮ್ಮ ಅಸುನೀಗಿದರು. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ:ಸೈರಸ್​ ಮಿಸ್ತ್ರಿ ಅಪಘಾತ ಕೇಸ್: ಕಾರು ಡ್ರೈವ್ ಮಾಡುತ್ತಿದ್ದ ಪಾಂಡೋಲೆ ಮೇಲೆ ಪ್ರಕರಣ ದಾಖಲು

ಬೈಕ್​ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details