ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಒಂದೇ ದಿನ 37 ಮಂದಿಗೆ ಕೊರೊನಾ ಸೋಂಕು ಪತ್ತೆ - Shimoga Corona Hospital

ಮಲೆನಾಡಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಬರೋಬ್ಬರಿ 37 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

37 peoples infected by  coronavirus in single day in Shimoga
ಶಿವಮೊಗ್ಗದಲ್ಲಿ ಒಂದೇ ದಿನ 37 ಮಂದಿಗೆ ಕೊರೊನಾ ಸೋಂಕು ಪತ್ತೆ

By

Published : Jul 9, 2020, 11:56 PM IST

ಶಿವಮೊಗ್ಗ:ಜಿಲ್ಲೆಯಲ್ಲಿಂದು ಮತ್ತೆ 37 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ.

ಇದುವರೆಗೂ ಜಿಲ್ಲೆಯಿಂದ 141 ಜನ ಬಿಡುಗಡೆಯಾಗಿದ್ದಾರೆ. ಆದರೆ ಇಂದು ಯಾರೊಬ್ಬರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿಲ್ಲ. ಆಸ್ಪತ್ರೆಯಲ್ಲಿ 227 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿಯೇ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ-16, ಭದ್ರಾವತಿ-4, ಸಾಗರ-6, ಶಿಕಾರಿಪುರ-3, ಹೊಸನಗರ-3, ತೀರ್ಥಹಳ್ಳಿ-1, ಸೊರಬದಲ್ಲಿ-3 ಪ್ರಕರಣಗಳು ಪತ್ತೆಯಾಗಿವೆ.

ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೋರ್ವ ಶಿವಮೊಗ್ಗ ಕೋವಿಡ್-19 ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಆತನಿಗೂ ಪಾಸಿಟಿವ್ ಬಂದಿದೆ. ತೀವ್ರ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರುವ 9 ಜನರು ದಾಖಲಾಗಿದ್ದಾರೆ. ಸದ್ಯ ಸೋಂಕಿತರು ಶಿವಮೊಗ್ಗಾದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details