ಕರ್ನಾಟಕ

karnataka

ETV Bharat / state

ಫೆ.29ರಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ.. - 5th convication of Shimoga Agriculture and Horticulture University

ವಿಶ್ವವಿದ್ಯಾಲಯವು ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ ಐಸಿಎಆರ್, ಜೆಆರ್​ಎಫ್ ಸ್ಕಾಲರ್‌ಶಿಪ್‌​ಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ 2ನೇ ಸ್ಥಾನ ಪಡೆದಿದೆ. ಕೆಎಸ್‌ಯುಆರ್‌ಎಫ್ ರೇಟಿಂಗ್​ನಲ್ಲಿ 4 ಸ್ಟಾರ್ ಪಡೆದಿದೆ ಎಂದರು.

Dr. MK Nayaka
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ ನಾಯ್ಕ

By

Published : Feb 26, 2020, 5:28 PM IST

ಶಿವಮೊಗ್ಗ :ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ವತಿಯಿಂದ 5ನೇ ಘಟಿಕೋತ್ಸವನ್ನು ಫೆ.29 ರಂದು ನವುಲೆಯ ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ ನಾಯ್ಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ವಜುಭಾಯಿ ವಾಲಾ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ ಸಿ ಪಾಟೀಲ್, ರಾಷ್ಟ್ರೀಯ ನೀತಿ ಆಯೋಗದ ಸದಸ್ಯರು ಹಾಗೂ 15ನೇ ಹಣಕಾಸು ಆಯೋಗದ ಸದಸ್ಯರಾದ ಪ್ರೊ.ರಮೇಶ್ ಚಂದ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ ಎಂದರು.

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ಕೆ ನಾಯ್ಕ..

5ನೇ ಘಟಿಕೋತ್ಸವದಲ್ಲಿ 245 ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 86 ಎಂಎಸ್ಸಿ ವಿದ್ಯಾರ್ಥಿಗಳು ಹಾಗೂ 13 ಪಿಹೆಚ್​ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. 7ಬಿಎಸ್ಸಿ ವಿದ್ಯಾರ್ಥಿಗಳಿಗೆ 13 ಚಿನ್ನದ ಪದಕ, 8 ಎಂಎಸ್ಸಿ ವಿದ್ಯಾರ್ಥಿಗಳಿಗೆ 8 ಚಿನ್ನದ ಪದಕ ಹಾಗೂ 4 ಪಿಹೆಚ್​ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳು ಸೇರಿ ಒಟ್ಟು 26 ಚಿನ್ನದ ಪದಕಗಳನ್ನು 19 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುತ್ತಿದೆ ಎಂದರು.

ವಿಶ್ವವಿದ್ಯಾಲಯವು ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ ಐಸಿಎಆರ್, ಜೆಆರ್​ಎಫ್ ಸ್ಕಾಲರ್‌ಶಿಪ್‌​ಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ 2ನೇ ಸ್ಥಾನ ಪಡೆದಿದೆ. ಕೆಎಸ್‌ಯುಆರ್‌ಎಫ್ ರೇಟಿಂಗ್​ನಲ್ಲಿ 4 ಸ್ಟಾರ್ ಪಡೆದಿದೆ ಎಂದರು.

ABOUT THE AUTHOR

...view details