ಶಿವಮೊಗ್ಗ:ಜನವರಿ ಮೊದಲನೇ ವಾರದಲ್ಲಿ ಸುರಿದ ಅಕಾಲಿಕ ಮಳೆಗೆ ಜಿಲ್ಲೆಯಲ್ಲಿ 65.72 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.
ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 65.72 ಹೆಕ್ಟೇರ್ ಬೆಳೆ ಹಾನಿ - Joint Director of Agriculture Department
ಜನವರಿ ಮೊದಲನೇ ವಾರದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ 53.72 ಹೆಕ್ಟೇರ್ ಹಾಗೂ ಹೊಸನಗರ ಭಾಗದಲ್ಲಿ 12 ರಷ್ಟು ಹೆಕ್ಟೇರ್ ಕಟಾವು ಮಾಡಿದ್ದ ಭತ್ತ ಹಾನಿಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದರು.
ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಜನವರಿ ಮೊದಲನೇ ವಾರದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ 53.72 ಹೆಕ್ಟೇರ್ ಹಾಗೂ ಹೊಸನಗರ ಭಾಗದಲ್ಲಿ 12 ರಷ್ಟು ಹೆಕ್ಟೇರ್ ಕಟಾವು ಮಾಡಿದ್ದ ಭತ್ತ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.
ಬೆಳೆ ಹಾನಿಗೆ ಸಂಬಂಧಪಟ್ಟಂತೆ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದು, ಆ ಪ್ರಕಾರವಾಗಿ ಸಮೀಕ್ಷೆ ಮಾಡಿ ವರದಿ ಪರೀಶಿಲಿಸಿ, ಯಾವ ರೀತಿಯಲ್ಲಿ ಪರಿಹಾರ ನೀಡಬೇಕು ಎಂಬುದನ್ನು ಜಿಲ್ಲಾ ಮಟ್ಟದಲ್ಲಿ ತೀರ್ಮಾನ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.