ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಚತುರ್ತಿ, ಮೊಹರಂ ವೇಳೆ ಶಾಂತಿ ಕಾಪಾಡಲು 8 ಮಂದಿ ಗಡಿಪಾರು: ಎಸ್ಪಿ - Ganapathi festival

ಜಿಲ್ಲೆಯಲ್ಲಿ ಶಾಂತಿಭಂಗ ತರುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಗಡಿಪಾರು ಮಾಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಎಂ ಶಾಂತರಾಜ್ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಎಂ ಶಾಂತರಾಜ್

By

Published : Aug 30, 2019, 7:28 PM IST

ಶಿವಮೊಗ್ಗ :ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಂಟು ಮಂದಿಯನ್ನು ಗಡಿಪಾರು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಎಂ ಶಾಂತರಾಜ್ ತಿಳಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಷದದಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿಭಂಗ ತರುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳಿಗೆ ಕಳಿಸಿಕೊಡಲಾಗಿದೆ ಎಂದರು.

ಶಾಂತಿ ಸುವ್ಯವಸ್ಥೆ ಕಾಪಾಡಲು 8 ಮಂದಿ ಗಡಿಪಾರು

ಗಣಪತಿ ಹಬ್ಬ ಹಾಗೂ ಮೊಹರಂ ಹಬ್ಬದ ಭದ್ರತೆಗಾಗಿ ನಗರದಲ್ಲಿ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಈಗಾಗಲೇ ಅಳವಡಿಸಲಾಗಿದ್ದು, ಅದರ ಜೊತೆಗೆ 200ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ ವತಿಯಿಂದ ಅಳವಡಿಸಲಾಗುವುದು ಎಂದರು. ಇನ್ನೂ ಪ್ರಮುಖ ಮೆರವಣಿಗೆ ಸಂದರ್ಭಗಳಲ್ಲಿ ಡ್ರೋಣ್ ಕ್ಯಾಮೆರಾಗಳನ್ನು ಕೂಡಾ ಬಳಸಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದ್ದು, ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details