ಶಿವಮೊಗ್ಗ:ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಅಬ್ಬಲಗೆರೆ ಗ್ರಾಮದ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ರಾಮ್ ಕುಮಾರ್ (22) ಹಾಗೂ ಕೆಂಚಿಕೊಪ್ಪ ಗ್ರಾಮದ ಮಲ್ಲಿಕಾರ್ಜುನ್ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದ ಹೊರ ಭಾಗದಲ್ಲಿನ ಐಪಿಎಲ್ ಕಾರ್ಖಾನೆಗೆ ಕರ್ತವ್ಯಕ್ಕೆಂದು ಬರುತ್ತಿರುವಾಗ ದುರ್ಘಟನೆ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಇಬ್ಬರು ಕಾರ್ಮಿಕರು ಸಾವು - ಅಬ್ಬಲಗೆರೆ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ
ಅಬ್ಬಲಗೆರೆ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ